ಗುವಾಹಟಿ, ಮೇ 15 (DaijiworldNews/HR): ದಿಮಾ ಹಸಾವೊ ಜಿಲ್ಲೆಯ ಹಫ್ಲಾಂಗ್ ಪ್ರದೇಶದಲ್ಲಿ ಶನಿವಾರ ಸಂಭವಿಸಿದ ಭೂಕುಸಿತ ಘಟನೆಗಳಲ್ಲಿ ಮೂವರು ಸಾವನ್ನಪ್ಪಿದ್ದು, ಸುಮಾರು 25,000 ಜನರು ಸಂತ್ರಸ್ತರಾಗಿದ್ದಾರೆ.
ಅಸ್ಸಾಂ ಮತ್ತು ನೆರೆಯ ರಾಜ್ಯಗಳಾದ ಮೇಘಾಲಯ ಮತ್ತು ಅರುಣಾಚಲ ಪ್ರದೇಶದಲ್ಲಿ ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಹಲವು ನದಿಗಳ ನೀರಿನ ಮಟ್ಟ ಕ್ರಮೇಣ ಹೆಚ್ಚುತ್ತಿದೆ.
ಇನ್ನು ಮೇ 14 ರವರೆಗೆ ಆರು ಜಿಲ್ಲೆಗಳ 94 ಹಳ್ಳಿಗಳಲ್ಲಿ ಒಟ್ಟು 24,681 ಜನರು ಹಾನಿಗೊಳಗಾಗಿದ್ದು, ಪ್ರವಾಹದಿಂದಾಗಿ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ 1732.72 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಮುಳುಗಡೆಯಾಗಿದೆ.