ಅಗರ್ತಲಾ, ಮೇ 15 (DaijiworldNews/HR): ತ್ರಿಪುರಾದ 11ನೇ ಮುಖ್ಯಮಂತ್ರಿಯಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮಾಣಿಕ್ ಸಾಹಾ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಬಿಪ್ಬಲ್ ಕುಮಾರ್ ದೇಬ್ ಶನಿವಾರ ಸಂಜೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಹಿನ್ನೆಲೆಯಲ್ಲಿ ಮಾಣಿಕ್ ಸಾಹಾ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ್ನಾಗಿ ನೇಮಕ ಮಾಡಲಾಗಿತ್ತು.
ಇನ್ನು ತ್ರಿಪುರಾ ರಾಜಧಾನಿ ಅಗರ್ತಲಾದಲ್ಲಿರುವ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಎಸ್ ಎನ್ ಅರ್ಯ ಅವರು ಸಹಾ ಅವರಿಗೆ ಪ್ರಮಾಣ ವಚನ ಬೋಧಿಸಿದ್ದು, ಈ ಕಾರ್ಯಕ್ರಮದಲ್ಲಿ ಸಚಿವರು, ಬಿಜೆಪಿಯ ಶಾಸಕರು ಉಪಸ್ಥಿತರಿದ್ದರು.