ಚಾಮರಾಜ ನಗರ, ಮೇ 15 (DaijiworldNews/DB): ಪಾರ್ವತಾಂಭ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಜಿಲ್ಲೆಯ ಗುಂಡ್ಲುಪೇಟೆಯ ಪಾರ್ವತಿ ಬೆಟ್ಟದಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.
ಸರ್ಪಭೂಷಣ (24) ಮೃತ ದುರ್ದೈವಿ. ಮಹಾದೇವಣ್ಣ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೋವಿಡ್ ಕಾರಣದಿಂದ 2 ವರ್ಷಗಳಿಂದ ಸ್ಥಗಿತಗೊಂಡಿದ್ದ ರಥೋತ್ಸವದಲ್ಲಿ ಈ ಬಾರಿ ಅಧಿಕ ಸಂಖ್ಯೆಯಲ್ಲಿ ಭಕ್ತಾದಿಗಳು ಸೇರಿದ್ದರು. ಜನಸಂಖ್ಯೆ ಹೆಚ್ಚಿದ್ದ ಕಾರಣ ಸ್ಥಳದಲ್ಲಿ ನೂಕುನುಗ್ಗಲು ಉಂಟಾಗಿ ದುರಂತ ಸಂಭವಿಸಿದೆ.