ಮಂಡ್ಯ, ಮೇ 15 (DaijiworldNews/DB): ಟಿಪ್ಪರ್ ಲಾರಿಯೊಂದು ಬಾಲಕಿ ಮೇಲೆ ಹರಿದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಮನಕಲಕುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಭೂಮಿಕಾ (6) ಮೃತ ಬಾಲಕಿ. ಮದ್ದೂರು ತಾಲೂಕಿನ ದುಂಡನಹಳ್ಳಿಯಲ್ಲಿ ಘಟನೆ ಸಂಭವಿಸಿದೆ. ಕೆಸ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದುರ್ಘಟನೆ ಹಿನ್ನೆಲೆಯಲ್ಲಿ ಟಿಪ್ಪರ್ ಲಾರಿ ನಿಯಂತ್ರಣಕ್ಕೆ ಆಗ್ರಹಿಸಿ ಗ್ರಾಮಸ್ಥರು ಸ್ಥಳದಲ್ಲಿ ಸೇರಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಿಂದಾಗಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾನವಾಯಿತು.