ಶಿವಮೊಗ್ಗ, ಮೇ 16 (DaijiworldNews/HR): ಗಾಡಿಕೊಪ್ಪದ ತುಂಗಾ ನಾಲೆ ಬಳಿ ಕಾರು ಢಿಕ್ಕಿಯಾಗಿ ಏಳು ಎಮ್ಮೆಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಇಬ್ಬರು ಅದೃಷ್ಟವಶಾತ್ ಪಾರಾಗಿರುವ ಘಟನೆ ನಡೆದಿದೆ.
ಶಿವಮೊಗ್ಗದಿಂದ ಆಯನೂರು ಕಡೆಗೆ ತೆರಳುತ್ತಿದ್ದ ಕಾರು ಎಮ್ಮೆಗಳಿಗೆ ಢಿಕ್ಕಿ ಹೊಡೆದಿದ್ದು, ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ.
ಇನ್ನು ರಸ್ತೆ ಮಧ್ಯೆ ಎಮ್ಮೆಗಳು ತೆರಳುತ್ತಿರುವುದು ಗೊತ್ತಾಗದೆ ಕಾರು ಢಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಏಳು ಎಮ್ಮೆಗಳು ಸ್ಥಳದಲ್ಲೇ ಮೃತಪಟ್ಟಿವೆ. ಆದರೆ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಕಾರಿನಲ್ಲಿದ್ದ ಇಬ್ಬರು ಪಾರಾಗಿದ್ದಾರೆ.
ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಎಮ್ಮೆಗಳ ಮಾಲೀಕರ ಪತ್ತೆ ಕಾರ್ಯ ನಡೆಯುತ್ತಿದೆ.