ಬೆಂಗಳೂರು, ಮೇ 16 (DaijiworldNews/HR): ರಾಜ್ಯದಾದ್ಯಂತ ಇಂದಿನಿಂದ ಕಲಿಕಾ ಚೇತರಿಕೆ ಕಾರ್ಯಕ್ರಮದೊಂದಿಗೆ ಶಾಲೆಗಳು ಆರಂಭವಾಗಿದ್ದು, ಇದಕ್ಕೆ ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಎರಡು ವರ್ಷಗಳ ಕೊರೊನಾದಿಂದಾಗಿ ಕಲಿಕೆ ನಷ್ಟ ತುಂಬುವ ಹಿನ್ನೆಲೆಯಲ್ಲಿ 15 ದಿನ ಮುಂಚಿತವಾಗಿ ಶಿಕ್ಷಣ ಇಲಾಖೆ ಶಾಲೆಗಳನ್ನು ಪ್ರಾರಂಭ ಮಾಡಿದ್ದು, ಈ 15 ದಿನ ಕಾಮನಬಿಲ್ಲು ಮತ್ತು ಕಲಿಕಾ ಚೇತರಿಕೆ ಅನ್ನೋ ವಿಶೇಷ ಕಾರ್ಯಕ್ರಮಗಳನ್ನು 1 ರಿಂದ 10 ನೇ ತರಗತಿಗಳಿಗೆ ಅನುಷ್ಠಾನ ಮಾಡಲಾಗುತ್ತಿದೆ.
ಇನ್ನು ಶಾಲೆಗಳ ಪ್ರಾರಂಭೋತ್ಸವ ಹಬ್ಬದ ರೀತಿ ಮಾಡಬೇಕು. ಸ್ಥಳೀಯ ಜನಪ್ರತಿನಿಧಿಗಳು, ನಾಗರಿಕರು, ಪೋಷಕರು, ಹಿರಿಯ ವಿದ್ಯಾರ್ಥಿಗಳನ್ನು ಆಹ್ವಾನಿಸಿ ಮಕ್ಕಳಲ್ಲಿ ಸ್ಥೈರ್ಯ ತುಂಬಲು ನಿರ್ಧರಿಸಲಾಗಿದೆ. ಶಾಲೆಗಳಿಗೆ ತೋರಣ ಕಟ್ಟಿ, ರಂಗೋಲಿ ಬಿಡಿಸಿ ಮಕ್ಕಳನ್ನು ಸ್ವಾಗತಿಸಬೇಕು. ಹಾಜರಾತಿ ಹೆಚ್ಚಾಗುವಂತೆ ನೋಡಿಕೊಳ್ಳಬೇಕು. ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು. ಇದಕ್ಕಾಗಿ ಶಿಕ್ಷಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಸೂಚನೆ ನೀಡಿರುವ ಹಿನ್ನಲೆಯಲ್ಲಿ ಶಾಲೆಗಳಲ್ಲಿ ಮಕ್ಕಳಿಗೆ ಸಿಹಿ ವಿತರಿಸಿ, ವಿಶಿಷ್ಠ ರೀತಿಯಲ್ಲಿ ಸ್ವಾಗತ ಕೋರಲಾಯಿತು.