ಬೆಂಗಳೂರು, ಮೇ 16 (DaijiworldNews/HR): ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶಭರಿತ ಮೋಡಗಳ ಪರಿಣಾಮ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮೇ 18ರಿಂದ ಇನ್ನಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾನುವಾರ ಭಾರಿ ಮಳೆಯಾಗಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಇಂದು ಮತ್ತು ನಾಳೆ ಗುಡುಗು-ಮಿಂಚುಸಹಿತ ಧಾರಾಕಾರ ಮಳೆ ಬೀಳುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಮೇ 18 ಹಾಗೂ 19ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸುರಿಯಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.