ಜಮ್ಮು, ಮೇ 16 (DaijiworldNews/HR): ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಕಾಶ್ಮೀರ್ ಫೈಲ್ಸ್ ಸಿನಿಮಾ ಭಯೋತ್ಪಾದನೆಗೆ ಪ್ರಚೋದನೆ ನೀಡಿದೆ ಎಂದು ಪಿಡಿಪಿ ಮುಖ್ಯಸ್ಥೆ ಮೆಹಾಬೂಬಾ ಮುಫ್ತಿ ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ವಾಸ್ತವ ಸಂಗತಿಯನ್ನು ಮುಚ್ಚಿಡುವ ಮೂಲಕ ಹಿಂದೂ-ಮುಸ್ಲಿಂರ ವಿವಾದವನ್ನಾಗಿಸಲಾಗಿದ್ದು, ನಾವು ಕಾಶ್ಮೀರಿ ಪಂಡಿತರಿಗೆ ಸುರಕ್ಷಿತ ವಾತಾವರಣವನ್ನು ನಿರ್ಮಿಸಿದ್ದೇವು. 2010, 2016 ರಲ್ಲಿ ಗರಿಷ್ಠ ಅಶಾಂತಿಯ ಸಂದರ್ಭದಲ್ಲಿ ಯಾವುದೇ ಹತ್ಯೆ ನಡೆದಿಲ್ಲ ಎಂದಿದ್ದಾರೆ.
ಇನ್ನು ಕಾಶ್ಮೀರ್ ಫೈಲ್ಸ್ ವಿವಾದ ಬಳಿಕ ಇದೀಗ ಜ್ಞಾನವಾಪಿ ಮಸೀದಿ ವಿಚಾರವನ್ನು ಮುನ್ನೆಲೆಗೆ ತರಲಾಗಿದ್ದು, ನಮ್ಮ ಎಲ್ಲಾ ಮಸೀದಿಗಳ ಮೇಲೆ ಕಣ್ಣಿಡಲಾಗಿದೆ. ಎಲ್ಲಾ ಮಸೀದಿಗಳನ್ನು ವಶಕ್ಕೆ ಪಡೆದ ನಂತರ ಎಲ್ಲವೂ ಸರಿಯಾಗಿದೆ ಎನ್ನುತ್ತಾರೆ ಎಂದರು.