ಬೆಂಗಳೂರು, ಮೇ 16 (DaijiworldNews/HR): ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ, ಇಂದು ರಾಜ್ಯ ಸರ್ಕಾರದಿಂದ 37 ಪೊಲೀಸ್ ಇನ್ಸ್ ಪೆಕ್ಟರ್ ವರ್ಗಾವಣೆ ಮಾಡಿ ಆದೇಶಿಸಲಾಗಿದೆ.
ಈ ಕುರಿತು ಡೈರೆಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಆದೇಶ ಹೊರಡಿಸಿದ್ದು, ಆಡಳಿತಾತ್ಮಕ ದೃಷ್ಠಿಯಿಂದ ಪೊಲೀಸ್ ಇನ್ಸ್ ಪೆಕ್ಟರ್ (ಸಿವಿಲ್) ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಇನ್ನು ಕರ್ನಾಟಕದಲ್ಲಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ 37 ಪೊಲೀಸ್ ಇನ್ಸ್ ಪೆಕ್ಟರ್ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ.