ನವದೆಹಲಿ, ಮೇ 17 (DaijiworldNews/HR): ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರಿಗೆ ಸಂಬಂಧಿಸಿದ ನಿವಾಸ ಮತ್ತು ಕಚೇರಿಗಳ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ದೆಹಲಿ, ಮುಂಬೈ ಹಾಗೂ ತಮಿಳುನಾಡಿನ ಚೆನ್ನೈ ಮತ್ತು ಶಿವಗಂಗೈನಲ್ಲಿ ಮಂಗಳವಾರ ದಾಳಿ ನಡೆಸಿದೆ.
ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಏಳು ಕಡೆಗಳಲ್ಲಿ ಸಿಬಿಐ ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದೆ.
ಇನ್ನು 2010 ಮತ್ತು 2014ರ ನಡುವಿನ ವಿದೇಶಿ ವ್ಯವಹಾರಗಳ ಸಂಬಂಧ ಕಾರ್ತಿ ಚಿದಂಬರಂ ವಿರುದ್ಧ ಸಿಬಿಐ ಹೊಸ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಇದಕ್ಕೆ ಸಂಬಂಧಿಸಿದಂತೆ ದಾಳಿ ಮಾಡಿದೆ.
ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದ ಸಮಯದಲ್ಲಿ 305 ಕೋಟಿ ರೂ. ಮೊತ್ತದ ವಿದೇಶಿ ಹಣವನ್ನು ಸ್ವೀಕರಿಸುವುದಕ್ಕಾಗಿ ಐಎನ್ಎಕ್ಸ್ ಮೀಡಿಯಾಗೆ ವಿದೇಶಿ ಹೂಡಿಕೆ ಉತ್ತೇಜನಾ ಮಂಡಳಿ ಅನುಮತಿ ನೀಡಿದ ಪ್ರಕರಣವು ಸೇರಿದೆ.