ನವದೆಹಲಿ, ಮೇ 17 (DaijiworldNews/MS): ಬಿಜೆಪಿಯ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಪ್ರಧಾನಿ ನರೇಂದ್ರ ಮೋದಿ ಪೂರೈಸುವಲ್ಲಿ ವಿಫಲವಾಗಿದ್ದು , ಪ್ರಧಾನಿಯೂ 'ಹಿಂದೂ ವಿರೋಧಿ'ಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.
ಬಿಜೆಪಿ ಪ್ರಣಾಳಿಕೆ ಭರವಸೆಗಳನ್ನು ಎತ್ತಿಹಿಡಿಯದ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಹಿಂದೂ ವಿರೋಧಿಯಾಗಿದ್ದಾರೆ' ಎಂದಿರುವ ಸುಬ್ರಮಣಿಯನ್ ಸ್ವಾಮಿ ಇದಕ್ಕೆ ಒಂದಷ್ಟು ಉದಾಹರಣೆಗಳನ್ನು ನೀಡಿದ್ದಾರೆ.
"ರಾಮ ಮಂದಿರ ಕುರಿತಾದ ಸುಪ್ರೀಂ ಕೋರ್ಟ್ ನಿರ್ಣಯವನ್ನು ವಿಳಂಬಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಐತಿಹಾಸಿಕ ರಾಮ ಸೇತುವಿಗೆ ಪ್ರಾಚೀನ ಪರಂಪರೆಯ ಸ್ಥಾನಮಾನ ನೀಡುವುದಕ್ಕೆ ವಿಳಂಬವಾಗುತ್ತಿದೆ, ಉತ್ತರಾಖಂಡದ ಹಳೆಯ ದೇವಸ್ಥಾನಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗಿದೆ, 1991ರ ಪೂಜಾ ಸ್ಥಳಗಳ ಕಾಯಿದೆಯನ್ನು ಹಿಂತೆಗೆದುಕೊಳ್ಳಲು ನಿರಾಕರಿಸಲಾಗುತ್ತಿದೆ"ಎಂದು ಸ್ವಾಮಿ ಟ್ವೀಟ್ ಮಾಡಿದ್ದಾರೆ.