ಜೈಪುರ , ಮೇ 17 (DaijiworldNews/MS): ಕಾರು-ಟ್ರಕ್ ಅಪಘಾತ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು,12 ಮಂದಿ ಗಾಯಗೊಂಡಿರುವ ದುರ್ಘಟನೆ ಇಂದು ಮುಂಜಾನೆ ದೆಹಲಿ-ಜೈಪುರ ಹೆದ್ದಾರಿಯಲ್ಲಿ ನಡೆದಿದೆ.
ಇವರೆಲ್ಲರೂ ಅಗಲಿದ ತಮ್ಮ ಕುಟುಂಬದ ಸದಸ್ಯರೊಬ್ಬರ ಅಂತ್ಯಕ್ರಿಯೆಗಾಗಿ ಸೋಮವಾರ ಬೆಳಗ್ಗೆ ಹರಿದ್ವಾರಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದರು. ಮೃತರನ್ನು ಭಾನುರಾಮ್ (35), ಮಹೇಂದ್ರ (33), ಆಶಿಶ್ (15), ಸುಗ್ಮಾ ದೇವಿ (35), ಮತ್ತು ಭೋರಿ ದೇವಿ (95) ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ಕುಟುಂಬದವರು, ಸಂಬಂಧಿಕರು ಸೇರಿ ಒಟ್ಟು 17 ಮಂದಿ ಇದ್ದರು. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ.
ಹೆದ್ದಾರಿಯಲ್ಲಿದ್ದ ಪ್ರಯಾಣಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಕೂಡಲೇ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.