ಬೆಂಗಳೂರು, ಮೇ 17 (DaijiworldNews/HR): ಹವಾಮಾನ ವೈಪರೀತ್ಯ ಹಿನ್ನಲೆಯಲ್ಲಿ ಮುಂದಿನ 2 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ ಸೇರಿ ಕರ್ನಾಟಕದ ಕರಾವಳಿ ಭಾಗದಲ್ಲಿ ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಮಾನ ಇಲಾಖೆ ನೀಡಿದೆ.
ಸಾಂದರ್ಭಿಕ ಚಿತ್ರ
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ತೇವಾಂಶಭರಿತ ಮೋಡಗಳ ಪರಿಣಾಮ ರಾಜ್ಯದ ಹಲವೆಡೆ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದ್ದು, ದಕ್ಷಿಣ ಕನ್ನಡದಲ್ಲಿ ಮೇ 18ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮೇ 19ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ಮುಂದಿನ 2 ದಿನಗಳ ಕಾಲ ಕರಾವಳಿ ಭಾಗದಲ್ಲಿ ಗುಡುಗು, ಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.