ನವದೆಹಲಿ, ಮೇ 17 (DaijiworldNews/MS): ಹಳೆಯ ವಾಹನಗಳ ನಿಷೇಧ ಪ್ರಶ್ನಿಸಿದ್ದ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ವಕೀಲರೊಬ್ಬರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ₹ 8 ಲಕ್ಷ ದಂಡ ವಿಧಿಸಿದೆ.
ದೆಹಲಿಯಲ್ಲಿ 10 ವರ್ಷಕ್ಕಿಂತ ಹಳೆಯ ಡೀಸೆಲ್ ವಾಹನಗಳು ಮತ್ತು 15 ವರ್ಷಕ್ಕಿಂತ ಹಳೆಯ ಪೆಟ್ರೋಲ್ ವಾಹನಗಳ ಮೇಲೆ ಹೇರಿದ್ದ ನಿಷೇಧವನ್ನು ಪ್ರಶ್ನಿಸಿ ನ್ಯಾಯವಾದಿಯಾಗಿರುವ ಅನುರಾಗ್ ಸಕ್ಸೇನಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯವಾದಿಯಾಗಿರುವ ನ್ಯಾಯಮೂರ್ತಿಗಳಾದ ಎಲ್ ನಾಗೇಶ್ವರ ರಾವ್, ಎ ಎಸ್ ಬೋಪಣ್ಣ ಹಾಗೂ ಬಿ ಆರ್ ಗವಾಯಿ ಅವರಿದ್ದ ಪೀಠ "ಈ ಮೊಕದ್ದಮೆ ಕ್ಷುಲ್ಲಕವಾಗಿದೆ. ಸುಪ್ರೀಂಕೋರ್ಟ್ನಲ್ಲಿ ಪ್ರಾಕ್ಟೀಸ್ ಮಾಡುತ್ತಿರುವ ಇಬ್ಬರು ವಕೀಲರು ದುಸ್ಸಾಹಸಕ್ಕೆ ಇಳಿದಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಅರ್ಜಿದಾರರಿಗೆ ₹ 8 ಲಕ್ಷ ದಂಡ ವಿಧಿಸಿ , ಈ ವಕೀಲರು ಸಲ್ಲಿಸಿದ ಯಾವುದೇ ರಿಟ್ ಅರ್ಜಿಗಳನ್ನು ನೋಂದಾಯಿಸದಂತೆ ರಿಜಿಸ್ಟ್ರಿಗೆ ಆದೇಶಿಸಿದೆ.
ಹಳೆಯ ವಾಹನಗಳಿಗೆ ನಿಷೇಧ ಹೇರುವುದು ಸಂವಿಧಾನದ 14ನೇ ವಿಧಿಯ ಉಲ್ಲಂಘನೆ ಎಂದು ಅರ್ಜಿದಾರರು ವಾದಿಸಿದ್ದು, ಪ್ರಕರಣ ಈಗಾಗಲೇ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಮತ್ತು ಸುಪ್ರೀಂ ಕೋರ್ಟ್ನ ಆದೇಶಗಳ ವ್ಯಾಪ್ತಿಗೆ ಒಳಪಟ್ಟಿದೆ ಎಂದು ಪೀಠವು ಅರ್ಜಿದಾರರಿಗೆ ಆರಂಭದಲ್ಲಿ ಎಚ್ಚರಿಕೆ ನೀಡಿತ್ತು. ಆದರೂ ಅರ್ಜಿದಾರರು ತಮ್ಮ ವಾದ ಮಂಡಿಸಿದ್ದು. ಅಂತಿಮವಾಗಿ ದಂಡ ವಿಧಿಸಿದ ನ್ಯಾಯಾಲಯ ಮನವಿಯನ್ನು ವಜಾಗೊಳಿಸಿದೆ.