ಬೆಂಗಳೂರು, ಮೇ 17 (DaijiworldNews/HR): ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೇ ಮೂಲಕ ಜಾರಿಗೆ ತರಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.
ವಿಧಾನಸಭೆಯಲ್ಲಿ ಮಾತ್ರ ಮತಾಂತರ ನಿಷೇಧ ಕಾಯ್ದೆ ಅಂಗೀಕಾರವಾಗಿದ್ದು, ವಿಧಾನ ಪರಿಷತ್ ನಲ್ಲಿ ಬಿಲ್ ಪಾಸ್ ಆಗದ ಕಾರಣ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೊಳಿಸುವುದಾಗಿ ಆದೇಶ ಹೊರಡಿಸಿತ್ತು.
ಇನ್ನು ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿಯೂ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಅನುಮೋದನೆ ದೊರೆತಿದ್ದು, ಇದೀಗ ರಾಜ್ಯಪಾಲರು ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆಗೆ ಅಂತಿಮ ಮುದ್ರೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.