ಬೆಂಗಳೂರು, ಮೇ 17 (DaijiworldNews/SM): ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಂದ ಬಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ ಆಶಾಕಾರ್ಯಕರ್ತೆಯರು ತಮ್ಮ ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಆರೋಗ್ಯ ಇಲಾಖೆ ಆಯುಕ್ತರು ಆಗಮಿಸಿ ಮನವರಿಕೆ ಮಾಡಿದ್ದು, ಸಭೆ ಕರೆಯುವ ಭರವಸೆ ನೀಡಿದ್ದಾರೆ.
ಇನ್ನು ಇದೇ ವೇಳೆ ವೇತನ ಹೆಚ್ಚಳದ ಕುರಿತಂತೆಯೂ ಮಾತುಕತೆ ನಡೆಸಲಾಗುವುದೆಂದು ಆಯುಕ್ತರು ಭರವೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಕೋವಿಡ್ ದಿನಗಳಿಂದ ಹಿಡಿದು ಎಲ್ಲಾ ಕಡೆಗಳಲ್ಲೂ ಉತ್ತಮ ಕೆಲಸ ನಿರ್ವಹಣೆ ಮಾಡಿದ್ದೀರಿ. ಅಗತ್ಯಕ್ಕಿಂತ ಹೆಚ್ಚಿನ ಕೆಲಸ ಮಾಡಿಸಿಕೊಂಡಲ್ಲಿ ಕಮಿಷನರ್ ಗಮನಕ್ಕೆ ತರಬೇಕಿದೆ ಆದ್ದರಿಂದ ಅವರ ಜೊತೆ ಮಾತನಾಡಿ ಸಭೆ ಬಗ್ಗೆ ತಿಳಿಸಲಾಗುವುದು ಎಂದು ಅವರು ಮನವರಿಕೆ ಮಾಡಿದ್ದಾರೆ.
ಆಂಧ್ರ ಮಾದರಿಯಂತೆ 10 ಸಾವಿರ ಸಂಬಳ ನಿಗದಿ ಮಾಡಬೇಕು ಎಂದು ಆಶಾ ಕಾರ್ಯಕರ್ತೆಯರು ಬೇಡಿಕೆ ಸಲ್ಲಿಸಿದರು.