ಬೆಂಗಳೂರು, ಮೇ 18 (DaijiworldNews/DB): ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಬುಧವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು.
ಬಿಜೆಪಿ ಪಕ್ಷದ ಬಾವುಟವನ್ನು ಹಿಡಿಯುವ ಮೂಲಕ ಅವರು ಪಕ್ಷಕ್ಕೆ ಪಾದಾರ್ಪಣೆ ಮಾಡಿದರು. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಚಿವ ಆರ್. ಅಶೋಕ್, ಗೋವಿಂದ ಕಾರಜೋಳ, ಗೃಹ ಸಚಿವ ಆರಗ ಜ್ಞಾನೇಂದ್ರ, ಶಾಸಕ ಎಂ.ಪಿ. ರೇಣುಕಾಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
ವಿಧಾನ ಪರಿಷತ್ ಸದಸ್ಯ ಹಾಗೂ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ಕಳೆದ ಎರಡು ದಿನಗಳ ಹಿಂದಷ್ಟೇ ರಾಜೀನಾಮೆ ಸಲ್ಲಿಸಿದ್ದರು. ಆ ಬಳಿಕ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಿಸಿದ್ದರು.