ಬೆಂಗಳೂರು, ಮೇ 18 (DaijiworldNews/MS): 2021-2022ರ ಎಸೆಸೆಲ್ಸಿ ಪರೀಕ್ಷಾ ಫಲಿತಾಂಶ ಮೇ 19ರ ಮಧ್ಯಾಹ್ನ 12.30ಕ್ಕೆ ಪ್ರಕಟವಾಗಲಿದೆ.
ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ನಡೆದಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಿದ್ದಾರೆ
ಅ ಬಳಿಕ ಎಸ್ ಎಸ್ ಎಲ್ ಸಿ ಬೋರ್ಡ್ ನ ಅಧಿಕೃತ ವೆಬ್ ಸೈಟ್ https://karresults.nic.in/ ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಇನ್ನೂ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್ಗಳಿಗೆ ಎಸ್ಎಂಎಸ್ ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.