ಬೆಂಗಳೂರು, ಮೇ 18 (DaijiworldNews/SM): ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಸರಕಾರ ಮುಂದಾಗಿದೆ. ಅದರಂತೆ 300 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಅನುಮತಿಸಿರುವುದಾಗಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಮಾಹಿತಿ ನೀಡಿದ್ದಾರೆ.
ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಕ್ಕೆ ಸಂಬಂಧಿಸಿದಂತೆ ಕಳೆದ ಜನವರಿ ತಿಂಗಳಲ್ಲಿ ಆರ್ಥಿಕ ಇಲಾಖೆಗೆ ಸಚಿವ ಕೃಷಿ ಸಚಿವರು ಮನಾವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಆರ್ಥಿಕ ಇಲಾಖೆ ಅನುಮತಿಸಿದೆ. ಈ ಕುರಿತಂತೆ ಶೀಘ್ರ ಅಧಿಸೂಚನೆ ಹೊರ ಬೀಳುವ ಸಾಧ್ಯತೆ ಇದೆ.
300 ಹುದ್ದೆಗಳನ್ನು ಕರ್ನಾಟಕ ಕೃಷಿ ಸೇವೆಗಳ ನಿಯಮದನ್ವಯ ಹುದ್ದೆಗಳ ನೇಮಕಾತಿಗೆ ಇಲಾಖೀ ಕ್ರಮಕೈಗೊಳ್ಳಲಿದೆ. ಅದರಂತೆ ನೇರ ನೇಮಕಾತಿ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.