ಶಿವಮೊಗ್ಗ, ಮೇ 19 (DaijiworldNews/HR): ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಿ.ಎಸ್.ನಾಗಭೂಷಣ್ (70) ಬುಧವಾರ ರಾತ್ರಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ನಾಗಭೂಷಣ ಅವರು 1952ರಲ್ಲಿ ಜನಿಸಿದ್ದು, ಗಣಿತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಇನ್ನು 1975ರಿಂದ 2005ರವರೆಗೆ ಆಕಾಶವಾಣಿಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿರುವ ಅವರು, 'ಗಮನ', 'ಅನೇಕ', 'ಈ ಭೂಮಿಯಿಂದ ಆ ಆಕಾಶದವರೆಗೆ', 'ಕುವೆಂಪು ಸಾಹಿತ್ಯ ದರ್ಶನ', 'ಬೇರು ಬಿಳಲು' ಸೇರಿದಂತೆ ಅನೇಕ ಕೃತಿಗಳನ್ನು ರಚಿಸಿದ್ದಾರೆ.
ನಾಗಭೂಷಣ್ ಅವರು ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿಮ್ಮಸಂದ್ರದವರಾಗಿದ್ದು, ಸದ್ಯ ಶಿವಮೊಗ್ಗ ವಿನೋಬನಗರದ ಕಲ್ಲಹಳ್ಳಿಯಲ್ಲಿ ಪತ್ನಿಯೊಂದಿಗೆ ನೆಲೆಸಿದ್ದರು.