ನವದೆಹಲಿ, ಮೇ 19 (DaijiworldNews/HR): ಕಾಂಗ್ರೆಸ್ ನಾಯಕ, ಮಾಜಿ ಕ್ರಿಕೆಟರ್ ನವಜೋತ್ ಸಿಂಗ್ ಸಿಧು ಅವರಿಗೆ ರಸ್ತೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೆ 1 ವರ್ಷ ಜೈಲುಶಿಕ್ಷೆ ವಿಧಿಸಿ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದೆ.
1988 ಡಿ.27ರಂದು ಪಟಿಯಾಲಾದಲ್ಲಿ ನಡೆದಿದ್ದ ರಸ್ತೆ ಜಗಳದಲ್ಲಿ ಗುರ್ನಾಮ್ ಸಿಂಗ್ ಎಂಬುವವರ ಮೇಲೆ ದಾಳಿ ನಡೆದಿದ್ದು, ಈ ಘಟನೆಯಲ್ಲಿ ಗುರ್ನಾಮ್ ಸಿಂಗ್ ಮೃತಪಟ್ಟಿದ್ದರು. ಈ ಪ್ರಕರಣ ಸಂಬಂಧ ನವಜೋತ್ ಸಿಂಗ್ ಸಿಧು ಗೆ 1 ವರ್ಷ ಜೈಲುಶಿಕ್ಷೆ ವಿಧಿಸಲಾಗಿದೆ.
ಇನ್ನು ಇಂದು ಈ ಸಂಬಂಧ ಅರ್ಜಿಯ ವಿಚಾರಣೆ ನಡೆಸಿದ ಬಳಿಕ ತನ್ನ ತೀರ್ಪು ಪ್ರಕಟಿಸಿದ ಸುಪ್ರೀಂ ಕೋರ್ಟ್ ನಾಯಾ ಪೀಠವು, 1988ರ ರಸ್ತೆ ಗಲಭೆ ಪ್ರಕರಣದಲ್ಲಿ ನವಜೋತ್ ಸಿಧುಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.