ನವದೆಹಲಿ, ಮೇ 19 (DaijiworldNews/DB): ಟೋಕಿಯೋದಲ್ಲಿ ಮೇ 24ರಂದು ನಡೆಯಲಿರುವ ಕ್ವಾಡ್ ನಾಯಕರ ನಾಲ್ಕನೇ ಕ್ವಾಡ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿದ್ದಾರೆ.
ಜಪಾನ್ ಪ್ರಧಾನಿ ಫುಮಿಯೊ ಕಿಶಿಡಾ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ದ್ವಿಪಕ್ಷೀಯ ಸಭೆಗಳು ಇದೇ ದಿನ ನಡೆಯಲಿದ್ದು, ಮೋದಿ ಪಾಲ್ಗೊಳ್ಳಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿತಿಳಿಸಿರುವುದಾಗಿ ವರದಿಯಾಗಿದೆ.
ಕೊರೊನಾ ಸಂಪೂರ್ಣ ನಿಯಂತ್ರಣ, ಸುರಕ್ಷಿತ, ಪರಿಣಾಮಕಾರಿ ಲಸಿಕೆ ಹೆಚ್ಚುವರಿಯಾಗಿ ಲಭ್ಯವಿರುವಂತೆ ನೋಡಿಕೊಳ್ಳುವುದು, ಗುಣಮಟ್ಟದ ಮೂಲಸೌಕರ್ಯಕ್ಕೆ ಉತ್ತೇಜನ ಸೇರಿದಂತೆ ವಿವಿಧ ವಿಚಾರಗಳನ್ನು ಕ್ವಾಡ್ ನಾಯಕರು ಚರ್ಚಿಸಲಿದ್ದಾರೆ. ಹವಾಮಾನ ವೈಪರೀತ್ಯ ಎದುರಿಸಲು ಸಿದ್ದತೆ, ತಂತ್ರಜ್ಞಾನ, ಬಾಹ್ಯಾಕಾಶ, ಸೈಬರ್ ಭದ್ರತೆ ವಿಚಾರದಲ್ಲಿಯೂ ಚರ್ಚೆ ನಡೆಯಲಿದೆ ಎನ್ನಲಾಗಿದೆ.