ನವದೆಹಲಿ, ಮೇ 20 (DaijiworldNews/HR): ಬಿಹಾರ ಆರ್ಜೆಡಿ ನಾಯಕ, ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ವಿರುದ್ಧ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಹೊಸ ಪ್ರಕರಣ ದಾಖಲಿಸಿದ್ದು, ಅವರಿಗೆ ಸಂಬಂಧಿಸಿದ 17ಕ್ಕೂ ಅಧಿಕ ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಲಾಲು ಪ್ರಸಾದ್ ವಿರುದ್ಧ ರೈಲ್ವೆ ಇಲಾಖೆಯ ಉದ್ಯೋಗಕ್ಕಾಗಿ ಆಕಾಂಕ್ಷಿಗಳಿಂದ ನಿರ್ದಿಷ್ಟ ಭೂಮಿ ಅಥವಾ ನಿವೇಶನಗಳನ್ನು ಪಡೆಯಲಾಗಿದೆ ಎಂದು ಆರೋಪಿಸಲಾಗಿದ್ದು, ಈ ಹೊಸ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲು ಪ್ರಸಾದ್ ಹಾಗೂ ಕುಟುಂಬಸ್ಥರಿಗೆ ಸಂಬಂಧಿಸಿದ ಬಿಹಾರ, ದೆಹಲಿಯ ವಿವಿಧ ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.
ಇನ್ನು ಮೇವು ಹಗರಣದಲ್ಲಿ ಲಾಲು ಪ್ರಸಾದ್ ಅವರು ಇತ್ತೀಚೆಗಷ್ಟೇ ಜಾಮೀನು ಪಡೆದಿದ್ದು, ಇದೀಗ ಹೊಸ ಪ್ರಕರಣದಲ್ಲಿ ಮತ್ತೆ ಅವರಿಗೆ ಸಂಬಂಧಿಸಿದ ಬಿಹಾರ, ದೆಹಲಿಯ ವಿವಿಧ ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.