ಮೈಸೂರು, ಮೇ 20 (DaijiworldNews/DB): ತ್ರಿಬಲ್ ರೈಡಿಂಗ್ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಇಬ್ಬರು ಯುವಕರು ಪ್ರಾಣ ಕಳೆದುಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ. ಇನ್ನೊಬ್ಬನ ಸ್ಥಿತಿ ಗಂಭೀರವಾಗಿದೆ.
ಕೂಡ್ಲಾಪುರದ ಸಚಿನ್ ಮತ್ತು ಉತ್ತನಹಳ್ಳಿಯ ದೊರೆಸ್ವಾಮಿ ಮೃತಪಟ್ಟವರು. ಮೈಸೂರಿನ ನಂಜನಗೂಡು ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ಘಟನೆ ನಡೆದಿದೆ.
ಈ ಮೂವರು ಯುವಕರು ನಂಜನಗೂಡಿನ ಸಿಂಧುವಳ್ಳಿ ಬಳಿಯ ಹುಣಸನಾಳು ಗ್ರಾಮಕ್ಕೆ ಬೈಕ್ನಲ್ಲಿ ತ್ರಿಬಲ್ ರೈಡಿಂಗ್ನಲ್ಲಿ ಹೋಗುತ್ತಿದ್ದರು. ಬೈಕ್ನಲ್ಲಿ ಸಂಚರಿಸುತ್ತಿರುವಾಗ ಮಾರ್ಗ ಮಧ್ಯೆ ರಸ್ತೆಯಲ್ಲಿ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದನ್ನು ಯುವಕರು ಗಮನಿಸಿದ್ದಾರೆ. ಇದರಿಂದ ಆತಂಕಗೊಂಡ ಯುವಕರು ಪೊಲೀಸರಿಂದ ತಪ್ಪಿಸಿಕೊಳ್ಳಲು ಏಕಾಏಕಿ ಯೂ ಟರ್ನ್ತೆಗೆದುಕೊಳ್ಳುವಾಗ ಹಿಂಬದಿಯಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಬೈಕ್ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಯುವಕರಿಬ್ಬರ ದೇಹ ರಸ್ತೆಯಲ್ಲಿ ಛಿದ್ರವಾಗಿ ಬಿದ್ದಿತ್ತು. ಇನ್ನೋರ್ವ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾನೆ.