ಬೆಂಗಳೂರು, ಮೇ 20 (DaijiworldNews/DB): ಹೈಕಮಾಂಡ್ ದಿಢೀರ್ ಕರೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಮಧ್ಯಾಹ್ನ ದೆಹಲಿಗೆ ಪ್ರವಾಸ ಕೈಗೊಂಡಿದ್ದಾರೆ.
ಬಿಜೆಪಿ ಹೈಕಮಾಂಡ್ ಸಿಎಂಗೆ ದಿಢೀರ್ ಕರೆ ಮಾಡಿ ದೆಹಲಿಗೆ ಬರುವಂತೆ ಬುಲಾವ್ ನೀಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ರಾಜಧಾನಿಯಲ್ಲಿ ಮಳೆಯ ಅಬ್ಬರದ ನಡುವೆ ಹಲವಾರು ತುರ್ತು ಕಾರ್ಯಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆಯಲ್ಲಿರುವಾಗಲೇ ಹೈಕಮಾಂಡ್ನಿಂದ ಬುಲಾವ್ ಬಂದಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕಚೇರಿಯಿಂದ ಮುಖ್ಯಮಂತ್ರಿಯವರಿಗೆ ದೂರವಾಣಿ ಕರೆ ಬಂದಿದೆ. ದಿಡೀರ್ ಕರೆ ಮಾಡಿ ಬರ ಹೇಳಿರುವುದರಿಂದ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಿಗಲಿದೆಯೇ ಎಂಬ ಕುತೂಹಲ ಹೆಚ್ಚಲು ಕಾರಣವಾಗಿದೆ.