ಚಂದ್ರಾಪುರ, ಮೇ 20 (DaijiworldNews/HR): ಡೀಸೆಲ್ ತುಂಬಿದ್ದ ಟ್ಯಾಂಕರ್ ಮತ್ತು ಮರ ಸಾಗಿಸುತ್ತಿದ್ದ ಟ್ರಕ್ ನಡುವೆ ಡಿಕ್ಕಿ ಸಂಭವಿಸಿ 9 ಮಂದಿ ಸಜೀವ ದಹನವಾಗಿರುವ ಘಟನೆ ಮಹಾರಾಷ್ಟ್ರದ ಚಂದ್ರಾಪುರ ನಗರದ ಹೊರವಲಯದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಚಂದ್ರಾಪುರ ನಗರದ ಸಮೀಪ ಅಜಯ್ಪುರ ಸಮೀಪ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಟ್ರಕ್ಗೆ ಡೀಸೆಲ್ ತುಂಬಿದ ಟ್ಯಾಂಕರ್ ಗುರುವಾರ ರಾತ್ರಿ 10.30ರ ಸುಮಾರಿಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ಬಳಿಕ ಬೆಂಕಿ ಕಾಣಿಸಿಕೊಂಡು 9 ಮಂದಿ ಸ್ಥಳದಲ್ಲೇ ಸಜೀವ ದಹನವಾಗಿದ್ದಾರೆ.
ಇನ್ನು ಅಪಘಾತದ ಸ್ಥಳಕ್ಕೆ ಅಗ್ನಿಶಾಮಕ ದಳವು ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದಿದೆ. ನಂತರ ಮೃತರ ಶವಗಳನ್ನು ಸಮೀಪದ ಚಂದ್ರಾಪುರ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ಪೊಲೀಸ್ ಅಧಿಕಾರಿ ಸುಧೀರ್ ನಂದನವರ್ ತಿಳಿಸಿದ್ದಾರೆ.