ನವದೆಹಲಿ, ಮೇ 20 (DaijiworldNews/HR): 2019ರ ನವೆಂಬರ್ನಲ್ಲಿ ನಡೆದ ಹೈದರಾಬಾದ್ ಪಶುವೈದ್ಯೆಯ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಯ ಆರೋಪಿಗಳ ಎನ್ಕೌಂಟರ್ ಬಗ್ಗೆ ತನಿಖೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ನೇಮಿಸಿದ ತನಿಖಾ ಸಮಿತಿಯು ತನ್ನ ವರದಿಯಲ್ಲಿ ಎನ್ಕೌಂಟರ್ ಅನ್ನು 'ಪೂರ್ವಯೋಜಿತ ಕೃತ್ಯ' ಎಂದು ಹೇಳಿರುವುದಾಗಿ ವರದಿಯಾಗಿದೆ.
2019ರ ನವೆಂಬರ್ ನಲ್ಲಿ 26 ವರ್ಷದ ಪಶುವೈದ್ಯೆಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಆರೋಪಿಗಳ ಮೇಲೆ ಆರೋಪಿಗಳು ಪೊಲೀಸರ ಆಯುಧ ಕಿತ್ತುಕೊಳ್ಳಲು ಪ್ರಯತ್ನ ನಡೆಸಿದ್ದಾರೆಂದು ಸುಳ್ಳು ಆರೋಪ ಮಾಡಿ ಉದ್ದೇಶಪೂರ್ವಕವಾಗಿ ಗುಂಡು ಹಾರಿಸಲಾಗಿತ್ತು ಎಂದು ವರದಿಯಲ್ಲಿ ತಿಳಿಸಲಾಗಿದೆ.
ಇನನು ವರದಿ ಸಲ್ಲಿಕೆಯಾದ ನಂತರ, ಆಯೋಗದ ವರದಿಯ ಮೇಲೆ ಕ್ರಮ ಕೈಗೊಳ್ಳುವಂತೆ ತೆಲಂಗಾಣ ಹೈಕೋರ್ಟ್ಗೆ ಸುಪ್ರೀಂ ಕೋರ್ಟ್ ಹೇಳಿದೆ.
2019ರ ನವೆಂಬರ್ ನಲ್ಲಿ 26 ವರ್ಷದ ಪಶುವೈದ್ಯೆಯೊಬ್ಬರು ಕ್ಲಿನಿಕ್ಗೆ ಭೇಟಿ ನೀಡಿ ಮನೆಗೆ ತೆರಳುತ್ತಿದ್ದಾಗ ಶಾದ್ ನಗರದಲ್ಲಿ ಅತ್ಯಾಚಾರ ನಡೆಸಿ ಸಜೀವ ದಹನ ಮಾಡಿ ಬಳಿಕ ಆಕೆಯ ಶವ ಹೆದ್ದಾರಿಯ ಅಂಡರ್ಪಾಸ್ನಲ್ಲಿ ಪತ್ತೆಯಾಗಿತ್ತು.