ಶ್ರೀನಗರ, ಮೇ 20 (DaijiworldNews/DB): ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಭದ್ರತಾ ಪಡೆಗಳು ಒಬ್ಬ ಭಯೋತ್ಪಾದಕನನ್ನು ಹೊಡೆದುರುಳಿಸಿದ್ದಾರೆ.
ಎಲ್ಓಸಿ ದರ್ಶನ್ ಪೋಸ್ಟ್ ಬಳಿ ಉಗ್ರರ ಅನುಮಾನಾಸ್ಪದ ಚಲನವಲನ ಕಂಡು ಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆಗಿಳಿದ ಭದ್ರತಾ ಪಡೆ ಯೋಧರು ಉಗ್ರರ ಗಡಿ ನುಸುಳುವಿಕೆ ಯತ್ನವನ್ನು ವಿಫಲಗೊಳಿಸಿದ್ದಾರೆ. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದಾಗ ಪ್ರತಿ ದಾಳಿ ನಡೆಸಿದ ಭದ್ರತಾ ಪಡೆಗಳು ಓರ್ವನನ್ನು ಹತ್ಯೆ ಮಾಡಿದ್ದಾರೆ. ಉಳಿದ ಉಗ್ರರ ನಿಗ್ರಹಕ್ಕೆ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.
ಸಮನ್ವಯ ಮತ್ತು ಸಕ್ರಿಯವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆ ಆರಂಭಿಸಲು ಭದ್ರತಾ ಪಡೆಗಳಿಗೆ ಹಾಗೂ ಪೊಲೀಸರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರವಷ್ಟೇ ಸೂಚನೆ ನೀಡಿದ್ದರು.