ಬೆಂಗಳೂರು, ಮೇ 21 (DaijiworldNews/HR): ರಾಜ್ಯದಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಸೇರಿದಂತೆ ಯಾವುದೇ ಚುನಾವಣೆ ಎದುರಿಸಲು ಪಕ್ಷವು ಸನ್ನದ್ದ ಸ್ಥಿತಿಯಲ್ಲಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಬಿಜೆಪಿ ಪಕ್ಷವು ಬೆಂಗಳೂರಿನಲ್ಲಿ ಗರಿಷ್ಠ ಸಂಸದರನ್ನು ಮತ್ತು ಶಾಸಕರನ್ನು ಹೊಂದಿದ್ದು, ಸಂಘಟನೆಯಾಗಿ ಪಕ್ಷವು ಅತ್ಯಂತ ಬಲಿಷ್ಠವಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತು ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಲಾಗುವುದು ಎಂದರು.
ಇನ್ನು ಸರ್ವೋಚ್ಛ ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸಿಕೊಂಡು ಚುನಾವಣೆ ನಡೆಸುವುದಾಗಿ ಮುಖ್ಯಮಂತ್ರಿ ಶ್ರೀ ಬಸವರಾಜ್ ಎಸ್. ಬೊಮ್ಮಾಯಿ ಅವರು ಈಗಾಗಲೇ ಹೇಳಿಕೆ ನೀಡಿದ್ದು, ಎಲ್ಲಾ ಚುನಾವಣೆಯಲ್ಲಿ ಗೆದ್ದು ಬಿಜೆಪಿಯು ಅಧಿಕಾರಕ್ಕೇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.