ಬೆಂಗಳೂರು, ಮೇ 21 (DaijiworldNews/HR): ಜಿಲ್ಲಾಧಿಕಾರಿ ಕಚೇರಿ ಮೇಲೆ ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಈ ವೇಳೆ ಲಂಚ ಪಡೆಯುತ್ತಿದ್ದ ಜಿಲ್ಲಾಧಿಕಾರಿ ಕಚೇರಿ ಮ್ಯಾನೇಜರ್ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಜಿಲ್ಲಾಧಿಕಾರಿ ಕಚೇರಿ ಮ್ಯಾನೇಜರ್ ಮಹೇಶ್ ಎಂಬವರು 5 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾಗಿ ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಮಹೇಶ್ನನ್ನು ಬಂಧಿಸಿದ್ದಾರೆ.
ಇನ್ನು ದಾಳಿ ವೇಳೆ ಕಚೇರಿಯಲ್ಲಿ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಕೂಡ ಇದ್ದು, ಜಿಲ್ಲಾಧಿಕಾರಿ ಕಚೇರಿ ಬಾಗಿಲು ಮುಚ್ಚಿ ಎಸಿಬಿ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.