ಸಿದ್ಧಾರ್ಥನಗರ (ಉತ್ತರಪ್ರದೇಶ), ಮೇ 22 (DaijiworldNews/DB): ನಿಂತಿದ್ದ ಟ್ರಕ್ಗೆ ಎಸ್ಯುವಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ಸಿದ್ಧಾರ್ಥ ನಗರದ ನೌಗಢ್-ಬನ್ಸಿ ರಸ್ತೆಯಲ್ಲಿ ಭಾನುವಾರ ನಡೆದಿದೆ.
ಮೃತರೆಲ್ಲರೂ ವಿವಾಹ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಕಾರಿನಲ್ಲಿ ವಾಪಸ್ಸಾಗುತ್ತಿದ್ದರು. ಈ ವೇಳೆ ನಿಂತಿದ್ದ ಟ್ರಕ್ಗೆ ಕಾರು ಢಿಕ್ಕಿ ಹೊಡೆದಿದೆ. ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಗೋರಖ್ಪುರದ ಬಿಆರ್'ಡಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ. ಅತಿ ವೇಗದ ಚಾಲನೆಯೇ ಘಟನೆಗೆ ಕಾರಣೆನ್ನಲಾಗಿದೆ. ಘಟನೆ ಬಗ್ಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳಿಗೆ ಚಿಕಿತ್ಸೆಗೆ ಎಲ್ಲಾ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ರಧಾನಿ ಮೋದಿ ಅವರೂ ಘಟನೆ ಕುರಿತು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ಪಿಎಂಎನ್ಆರ್ಎಫ್ನಿಂದ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.