ಪಣಜಿ, ಮೇ 22 (DaijiworldNews/DB): ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಬೆಳಗಾವಿ ಮೂಲದ ಮೂವರು ಸಾವನ್ನಪ್ಪಿದ ಘಟನೆ ಗೋವಾದ ಮಾಪ್ಸಾದಲ್ಲಿ ಭಾನುವಾರ ಮುಂಜಾನೆ ನಡೆದಿದೆ.
ಮೃತರನ್ನು ಅನಗೋಳಕರ್ (28), ರೋಹನ್ ಗದಗ (26), ಸನ್ನಿ ಅಣವೇಕರ್ (31) ಎಂದು ಗುರುತಿಸಲಾಗಿದೆ. ಇನ್ನೋರ್ವ ಪ್ರಯಾಣಿಕ ವಿಶಾಲ ಕಾರೇಕರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಗೋವಾದ ಬಾಂಬೋಲಿಂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಂಜಾನೆ ಸುಮಾರು 4 ಗಂಟೆಯ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಮಾಪ್ಸಾದ ಕುಚೇಲಿಯಲ್ಲಿ ರಸ್ತೆ ಬದಿಯ ಮರಕ್ಕೆ ಕಾರು ಢಿಕ್ಕಿ ಹೊಡೆದಿದೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.