ಬೆಂಗಳೂರು, ಮೇ 22 (DaijiworldNews/DB): ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ಆಕಾಂಕ್ಷಿಗಳ ಹೆಸರನ್ನು ನಾನು ಮತ್ತು ಮಾಜಿ ಸಿಎಂ ಸಿದ್ದರಾಮಯ್ಯವರು ಕುಳಿತು ಚರ್ಚಿಸಿ ಹೈಕಮಾಂಡ್ಗೆ ಒಮ್ಮತವಾಗಿ ಶಿಫಾರಸ್ಸು ಮಾಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ಗೆ ನೂರಕ್ಕೂ ಹೆಚ್ಚು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಎಲ್ಲರ ಹೆಸರನ್ನು ಪಟ್ಟಿ ಮಾಡಿ ಹೈಕಮಾಂಡ್ಗೆ ಕಳುಹಿಸಲಾಗಿದೆ. ಹೈಕಮಾಂಡ್ ಪಟ್ಟಿ ಪರಿಶೀಲಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.
ವಿಧಾನ ಪರಿಷತ್ಗೆ ಇರುವುದು ಕೇವಲೆರಡು ಸ್ಥಾನ. ಹೀಗಾಗಿ ಎಲ್ಲಾ ವರ್ಗದವರನ್ನು ಗಮನದಲ್ಲಿಟ್ಟುಕೊಂಡೇ ಹೆಸರುಗಳನ್ನು ಶಿಫಾರಸ್ಸು ಮಾಡಲಾಗಿದೆ. ರಾಜ್ಯಸಭೆ ಟಿಕೆಟ್ ಸಂಬಂಧ ಇನ್ನೂ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದವರು ತಿಳಿಸಿದರು.