ಬೆಂಗಳೂರು, ಮೇ 22 (DaijiworldNews/HR): ಸಿದ್ದರಾಮಯ್ಯ ಅವರೊಂದಿಗೆ ವಿಧಾನ ಪರಿಷತ್ ಟಿಕೆಟ್ ಬಗ್ಗೆ ನಾನು ಚರ್ಚಿಸಿಲ್ಲ. ನಾನು ಲಾಬಿ ಮಾಡಲ್ಲ. ಅದು ಪಕ್ಷಕ್ಕೆ ಬಿಟ್ಟಿದ್ದು ಎಂದು ಹಿರಿಯ ಕಾಂಗ್ರೆಸ್ ನಾಯಕ ಎಸ್.ಆರ್.ಪಾಟೀಲ್ ಹೇಳಿದ್ದಾರೆ.
ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಟಿಕೆಟ್ ನೀಡುವ ಐಡಿಯವಿಲ್ಲ. ಈ ಬಗ್ಗೆ ನಮ್ಮ ಪಕ್ಷದ ನಾಯಕಿ ಸೋನಿಯಾ ಗಾಂಧಿ ನಿರ್ಣಯ ಮಾಡುತ್ತಾರೆ. ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ಅವಕಾಶ ಕಲ್ಪಿಸಿದರೆ ನಿಷ್ಠೆಯಿಂದ ಕೆಲಸ ಮಾಡುತ್ತೇನೆ ಎಂದರು.
ಇನ್ನು ಪಕ್ಷದ ನಿರ್ಣಯವು ತಾಯಿಗೆ ಸಮಾನವೆಂದು ಗೌರವಿಸಿದ್ದೀನಿ. ಪಕ್ಷ ನನಗೆ ಬಹಳಷ್ಟು ಅವಕಾಶ ಕಲ್ಪಿಸಿದೆ. ಎರಡು ಬಾರಿ ವಿರೋಧ ಪಕ್ಷದ ನಾಯಕರಾಗಿ, ಮಂತ್ರಿಯಾಗಿದ್ದೇನೆ. 24 ವರ್ಷಗಳ ಕಾಲ ಮೇಲ್ಮನೆ ಸದಸ್ಯನಾಗಿದ್ದೇನೆ ಎಂದು ಹೇಳಿದ್ದಾರೆ.