ಶಿವಮೊಗ್ಗ, ಮೇ 22 (DaijiworldNews/HR): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತಾರೆ ಎಂಬ ವಿಚಾರ ಕೇಳಿಬರುತ್ತಲೇ ಇದ್ದು, ಕರ್ನಾಟಕದಲ್ಲಿ ಬೊಮ್ಮಾಯಿಯವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಯಾವ ಮಂತ್ರಿಯೂ ಬದಲಾವಣೆ ಆಗಿಲ್ಲ. ಇವೆಲ್ಲಾ ಸೃಷ್ಟಿ ಅಷ್ಟೇ, ಮುಖ್ಯಮಂತ್ರಿ ಬದಲಾವಣೆ ಅನ್ನೋದು ಸಣ್ಣ ವಿಚಾರ ಅಲ್ಲ. ಹಾಗಾಗಿ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರೇ ಮುಂದುವರಿಯಲಿದ್ದಾರೆ ಎಂದರು.
ಇನ್ನು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದಮೇಲೆ ಸಾಕಷ್ಟು ಅಭಿವೃದ್ಧಿಯಾಗಿದ್ದು, ರಾಜ್ಯದ ಜನ ಮೆಚ್ಚುತ್ತಿದ್ದಾರೆ. ಕಾಂಗ್ರೆಸ್ ನವರು ಇಲ್ಲದೇ ಇರೋ ಗೊಂದಲ ಸೃಷ್ಟಿ ಮಾಡ್ತಾರೆ ಎಂದಿದ್ದಾರೆ.