ಬೆಂಗಳೂರು, ಮೇ 22 (DaijiworldNews/SM): ರಾಜ್ಯದಲ್ಲಿ ಪೆಟ್ರೋಲ್ ಡೀಸೆಲ್ ತೆರಿಗೆ ಕಡಿತಗೊಳಿಸುವ ಬಗ್ಗೆ ಶೀಘ್ರದಲ್ಲೇ ಪರಿಶೀಲನೆ ನಡೆಸಲಾಗುವುದೆಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸ್ವಿಟ್ಜರ್ಲೆಂಡ್ನ ದಾವೋಸ್ ನಲ್ಲಿ ಮೇ 24ರಂದು ನಡೆಯಲಿರುವ 'ವಿಶ್ವ ಆರ್ಥಿಕ ಶೃಂಗ'ದಲ್ಲಿ ನಾನು ಭಾಗವಹಿಸಲಿದ್ದೇನೆ. ಪ್ರಮುಖ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಲಿದ್ದೇನೆ. ರಾಜ್ಯದಲ್ಲಿ ಹೂಡಿಕೆಗೆ ಪ್ರಯತ್ನಿಸಲಾಗುವುದೆಂದು ಅವರು ಹೇಳಿದ್ದಾರೆ.
ಈ ತ್ರೈಮಾಸಿಕದಲ್ಲಿ ಭಾರತಕ್ಕೆ ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಹರಿದುಬಂದಿದೆ. ಕಳೆದ ನಾಲ್ಕು ತ್ರೈಮಾಸಿಕದಲ್ಲಿ ಕರ್ನಾಟಕಕ್ಕೆ ಅತಿಹೆಚ್ಚು ಬಂಡವಾಳ ಹರಿದು ಬಂದಿತ್ತು. ಅಲ್ಲದೆ, ಈ ಬಾರಿಯೂ ನಮಗೆ ಹೆಚ್ಚು ಬಂಡವಾಳ ಹರಿದು ಬಂದಿದೆ ಎಂದರು.