ತುಮಕೂರು, ಮೇ 23 (DaijiworldNews/MS): ’ಗೋಮಾಂಸ ನನಗೆ ತಿನ್ನಬೇಕು ಅನಿಸಿದರೆ ತಿನ್ನುತ್ತೇನೆ, ಆದರೆ ನಾನು ಇಲ್ಲಿವರೆಗೆ ಅದನ್ನು ಸೇವಿಸಿಲ್ಲ’ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಅಲ್ಪ ಸಂಖ್ಯಾತರ ಹಕ್ಕುಗಳ ಬಗ್ಗೆ ಅಥವಾ ಅವರ ಪರವಾಗಿ ಮಾತನಾಡಿದರೆ, ಸಂಘ ಪರಿವಾರದವರು ನೀನು ಮುಸ್ಲಿಂ ಸಮುದಾಯದಲ್ಲಿ ಹುಟ್ಟಿದ್ದಿಯಾ ಎಂದು ಕೇಳುತ್ತಾರೆ. ಸಗಣಿ, ಗಂಜಲ ಎತ್ತದ, ಹಸು ಸಾಕದ, ಉಳುಮೆ ಮಾಡದವರು ಗೋ ಹತ್ಯೆ ಬಗ್ಗೆ ಮಾತನಾಡುತ್ತಾರೆ. ನಾವು ಅವರಿಂದ ಪಾಠ ಕಲಿಯಬೇಕಿಲ್ಲ ಎಂದು ಹೇಳಿದರು.
ನಮ್ಮ ಧರ್ಮದ ನಿಷ್ಠೆಯ ಜತೆಗೆ ಮನಗೆ ಇತರೆ ಧರ್ಮಗಳನ್ನು ಗೌರವಿಸುವ ಸಹಿಷ್ಣುತೆ ಇರಬೇಕು. ಬೇರೆ ಧರ್ಮದ ಬಗ್ಗೆ ದ್ವೇಷ, ಅಸೂಯೆ ಇದ್ದರೆ ನಾವು ಮನುಷ್ಯರಾಗಲು ಅರ್ಹರಲ್ಲ. ಹೀಗಾಗಿ ಮೊದಲು ನಾವು ಮಾನವರಾಗಬೇಕು, ನಮ್ಮ ದೇಶದಲ್ಲಿ ಎಲ್ಲಾ ಧರ್ಮಗಳ ಜನರ ನಡುವೆ ಸಹಬಾಳ್ವೆ ಅಗತ್ಯ ಇದನ್ನೇ ನಮ್ಮ ಸಂವಿಧಾನವೂ ಪ್ರತಿಪಾದಿಸುತ್ತದೆ ಎಂದು ತಿಳಿಸಿದರು.
ಸಂಘ ಪರಿವಾರವಾರದ ವಿರುದ್ದ ಕಿಡಿಕಾರಿದ ಅವರು, ಆರ್ಎಸ್ಎಸ್ ಸಂಸ್ಥಾಪಕ ಕೇಶವ ಹೆಡಗೇವಾರ್, ಸಿಎಂ ಬಸವರಾಜ ಬೊಮ್ಮಾಯಿ ಮಾತ್ರ ಹಿಂದೂನಾ? ನಾವು ಹಿಂದೂಗಳೇ ಇವರೆಲ್ಲರೂ ಧರ್ಮ, ಮನುಷ್ಯರ ನಡುವೆ ಗೋಡೆ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಸಮಾಜವನ್ನು ಜಾತಿ, ಧರ್ಮದ ಹೆಸರಲ್ಲಿ ಒಡೆಯುತ್ತಿದ್ದಾರೆ ಎಂದು ದೂರಿದರು.