ಬೆಂಗಳೂರು, ಮೇ 23 (DaijiworldNews/MS): ವ್ಯಾಸಂಗಕ್ಕೆಂದು ರಾಜ್ಯ ರಾಜಧಾನಿಗೆ ಬಂದಿದ್ದ ಯುವತಿಯೋರ್ವಳಿಗೆ ರಿವಾಲ್ವಾರ್ ನಲ್ಲಿ ಬೆದರಿಸಿ ಅತ್ಯಾಚಾರವೆಸಗಿದ ಆರೋಪ ಕೇಳಿಬಂದಿದೆ.
ಸಂತ್ರಸ್ತೆ ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ ಬಿಹಾರ ಮೂಲದ ಉದ್ಯಮಿಯನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಅನಿಲ್ ರವಿಶಂಕರ್ ಪ್ರಸಾದ್ ಎಂದು ಗುರುತಿಸಲಾಗಿದೆ.
ಟೈಲ್ಸ್ ವ್ಯಾಪಾರ ಮಾಡುತ್ತಿದ್ದ. ಈತನ ಒಡೆತನದ ಪಿಜಿಯಲ್ಲಿದ್ದ ಯುವತಿಯೊಬ್ಬಳಿಗೆ ಆರೋಪಿಯು ರಿವಾಲ್ವಾರ್ ತೋರಿಸಿ ಬೆದರಿಕೆ ಹಾಕಿ ಅತ್ಯಾಚಾರವೆಸಗಿದ್ದಾನೆ ಎಂದು ದೂರು ದಾಖಲಾಗಿದೆ. ಪೊಲೀಸರು ಆರೋಪಿ ಬಂಧಿಸಿ ರಿವಾಲ್ವರ್ ಅನ್ನೂ ಜಪ್ತಿ ಮಾಡಿದ್ದಾರೆ. ಆರೋಪಿಯನ್ನ ನ್ಯಾಯಾಲಯಕ್ಕೆ ಹಾಜರುಪಡಿಸಿ ಮೂರು ದಿನಗಳ ಕಸ್ಟಡಿಗೆ ಪಡೆದಿದ್ದಾರೆ.