ತಿರುವನಂತಪುರಂ, ಮೇ 23 (DaijiworldNews/HR): ಪತಿಯ ವರದಕ್ಷಿಣೆ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ವಿಸ್ಮಯ ನಾಯರ್ ಪ್ರಕರಣದಲ್ಲಿ ಆಕೆ ಪತಿ ಕಿರಣ್ ಕುಮಾರ್ ಅವರನ್ನು ದೋಷಿ ಎಂದು ಕೇರಳದ ಕೊಲ್ಲಂನ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
ಪ್ರಕರಣದ ತೀರ್ಪನ್ನು ಇವತ್ತಿಗೆ ಕಾಯ್ದಿರಿಸಿದ್ದ ಕೋರ್ಟ್ 304(ಬಿ), 498(ಎ), 306 ಐಪಿಸಿ ಮತ್ತು ವರದಕ್ಷಿಣೆ ನಿಷೇಧ ಕಾಯ್ದೆಯ 3,4 ಆರೋಪದಡಿ ಪತಿಯನ್ನು ದೋಷಿ ಎಂದು ತೀರ್ಪು ನೀಡಿದೆ.
ಇನ್ನು 42 ಸಾಕ್ಷಿಗಳು, 102 ದಾಖಲೆಗಳು ಮತ್ತು ಹಲವಾರು ಕರೆ ದಾಖಲೆಗಳನ್ನು ವಿಚಾರಣೆಯ ವೇಳೆ ನ್ಯಾಯಾಲಯದಲ್ಲಿ ಪರಿಶೀಲಿಸಲಾಗಿದೆ.
ಆಯುರ್ವೇದ ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ವಿಸ್ಮಯಾ, 22, ಜೂನ್ 21, 2021 ರಂದು ಕೊಲ್ಲಂ ಜಿಲ್ಲೆಯ ಸಾಸ್ತಮಕೋಟಾದಲ್ಲಿ ತನ್ನ ಗಂಡನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು.