ಬೆಂಗಳೂರು, ಮೇ 23 (DaijiworldNews/HR): ಜೆಡಿಎಸ್ ಅಭ್ಯರ್ಥಿಗಳ ಹೆಸರನ್ನು ವಿಧಾನಪರಿಷತ್ ಚುನಾವಣೆಗೆ ಘೋಷಿಸಲಾಗಿದ್ದು, ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ನಿಂಗಪ್ಪ ಗಡದಿನ್ನಿ ಹಾಗೂ ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಚಂದ್ರಶೇಖರ ಲೋಣಿ ಅವರಿಗೆ ಟಿಕೆಟ್ ನೀಡಲಾಗಿದೆ.
ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿದ್ದ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ಅವರಿಗೆ ಟಿಕೆಟ್ ನೀಡಲಾಗಿದ್ದು, ಹೊರಟ್ಟಿ ಅವರು ಬಿಜೆಪಿ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಜೆಡಿಎಸ್ ನಿಂದ ಶ್ರೀಶೈಲ ನಿಂಗಪ್ಪ ಅವರನ್ನು ಕಣಕ್ಕಿಳಿಸಲು ತೀರ್ಮಾನಿಸಲಾಗಿದೆ. ವಾಯುವೆ ಶಿಕ್ಷಕರ ಕ್ಷೇತ್ರದಿಂದ ಚಂದ್ರಶೇಖರ ಲೋಣಿ ಸ್ಪರ್ಧಿಸಲಿದ್ದಾರೆ.
ಇನ್ನು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ತೀರ್ಮಾನ ಮಾಡುತ್ತೇವೆ. ಎಲ್ಲಾ ಪಕ್ಷಗಳಲ್ಲೂ ಏರುಪೇರು ಸಹಜವಾಗಿದೆ. ಶರವಣ ಜೊತೆಯೂ ಈಗ ಚರ್ಚಿಸಿದೆ. ಅವರೂ ತುಂಬಾ ನಿರೀಕ್ಷೆ ಇಟ್ಕೊಂಡಿದ್ದಾರೆ. ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗಿದೆ ಎಂದು ಜೆಡಿಎಸ್ ವರಿಷ್ಠ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.