ಕೋಲ್ಕತ್ತ, ಮೇ 24 (DaijiworldNews/DB): ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಒಕ್ಕೂಟ ವ್ಯವಸ್ಥೆಯನ್ನೇ ನಾಶ ಮಾಡುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಸಂಸ್ಥೆಗಳಿಗೆ ಸ್ವಾಯತ್ತೆ ನೀಡಿದರೆ ಪ್ರಜಾಪ್ರಭುತ್ವದ ರಕ್ಷಣೆಯಾಗುತ್ತದೆ. ಆದರೆ ಕೇಂದ್ರ ಸರ್ಕಾರವು ರಾಜ್ಯಗಳ ವಿಚಾರದಲ್ಲಿ ಹಸ್ತಕ್ಷೇಪ ಈ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ. ಆ ಮೂಲಕ ಒಕ್ಕೂಟ ವ್ಯವಸ್ಥೆಯೇ ಹಾಳಾಗುತ್ತಿದೆ. ರಾಜ್ಯಗಳ ವಿಚಾರದಲ್ಲಿ ಕೇಂದ್ರದ ಮಧ್ಯಪ್ರವೇಶ ಖಂಡನೀಯ ಎಂದು ದೂರಿದ್ದಾರೆ.
ಸ್ವಾಯತ್ತ ಇಲ್ಲದ ಕಾರಣ ಕೇಂದ್ರ ಸಂಸ್ಥೆಗಳಿಗೆ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಅವರ ಸ್ವಾಯತ್ತೆಯು ಇಬ್ಬರು ವ್ಯಕ್ತಿಗಳು ಹಾಗೂ ಬಿಜೆಪಿ ಕೈಯಲ್ಲಿ ನರಳುತ್ತಿದೆ. ಅಡಾಲ್ಫ್ ಹಿಟ್ಲರ್, ಜೋಸೆಫ್ ಸ್ಟಾಲಿನ್, ಬೆನಿಟೊ ಮುಸ್ಸೊಲಿನಿ ಅವರಂತ ಸರ್ವಾಧಿಕಾರಿಗಳ ಆಡಳಿತದ ವೇಳೆಯೂ ರಾಜಕೀಯ ಹಸ್ತಕ್ಷೇಪ ಇಷ್ಟೊಂದು ಕೆಳ ಮಟ್ಟಕ್ಕೆ ಇಳಿದಿರಲಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.