ಬೆಂಗಳೂರು, ಮೇ 24 (DaijiworldNews/MS): ರಾಜ್ಯ ರಾಜಧಾನಿಯಲ್ಲಿ ರಾತ್ರಿ 10 ಗಂಟೆಯ ಬಳಿಕ ಪಟಾಕಿ ಸಿಡಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ಇದರಿಂದ ಹಲವರಿಗೆ ಸಮಸ್ಯೆಯಾಗುತ್ತಿದೆ ಎಂದು ಪೊಲೀಸ್ ಇಲಾಖೆಗೆ ರಾಜಾಜಿನಗರ ಶಾಸಕ ಎಸ್. ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.
ಐಪಿಎಲ್ ಮ್ಯಾಚ್ , ಮಧ್ಯರಾತ್ರಿ ಹುಟ್ಟಿದಹಬ್ಬ ನೆಪದಲ್ಲಿ ಪಟಾಕಿ ಸಿಡಿಸುವುದು ಮತ್ತು ಸಂಭ್ರಮಾಚರಣೆಯ ನೆಪದಲ್ಲಿ ಶಬ್ಧಮಾಲಿನ್ಯ ಉಂಟಾದರೆ, ಎಳೆ ಮಕ್ಕಳಿಗೆ, ವೃದ್ಧರಿಗೆ ಮತ್ತು ಖಾಯಿಲೆಗಳಿಂದ ಬಳಲುತ್ತಿರುವವರಿಗೆ ಸಮಸ್ಯೆಯಾಗುತ್ತದೆ. ಪಶು-ಪಕ್ಷಿಗಳಿಗೂ ತೊಂದರೆಯಾಗುತ್ತಿದೆ ಎಂದು ಸುರೇಶ್ ಕುಮಾರ್ ಪತ್ರದಲ್ಲಿ ವಿವರಿಸಿದ್ದಾರೆ.
ಆದ್ದರಿಂದ, ಈ ರೀತಿಯ ಘಟನೆಗಳು ಪತ್ತೆಯಾದರೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸುರೇಶ್ ಕುಮಾರ್ ಪತ್ರದಲ್ಲಿ ಬೆಂಗಳೂರು ಪೊಲೀಸರನ್ನು ಒತ್ತಾಯಿಸಿದ್ದಾರೆ.