ಬೆಂಗಳೂರು, ಮೇ 24 (DaijiworldNews/HR): ಆರೇಳು ವರ್ಷಗಳಿಂದ ನಮ್ಮ ಪಕ್ಷದ ಬಗ್ಗೆ ಕಾಂಗ್ರೆಸ್ ಪಕ್ಷದ ಡೋಂಗಿ ಜ್ಯಾತ್ಯತೀತ ನಾಯಕರು ಸುಳ್ಳು ಪ್ರಚಾರ ಮಾಡುತ್ತಿದ್ದು ಅವರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷವನ್ನು ಬಿಜೆಪಿ ಬಿ ಟೀಂ ಎಂದು ಬಿಂಬಿಸಲುಕಾಂಗ್ರೆಸ್ ನಾಯಕರು ಪ್ರಯತ್ನ ಮಾಡಿದ್ದಾರೆ, ಅದನ್ನು ಇನ್ನೂ ಮುಂದುವರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇನ್ನು ಇತ್ತೀಚೆಗೆ ತುಮಕೂರಿನಲ್ಲೂ ಕಾಂಗ್ರೆಸ್ ನಾಯಕರು ನಮ್ಮ ಪಕ್ಷದ ಬಗ್ಗೆ ಲಘುವಾಗಿ ಮಾತಾಡಿದ್ದು, ಅವರೇ ಜಾತಿವಾರು ಸಮಾವೇಶ ಮಾಡಿಕೊಂಡು ನಾವು ಜಾತ್ಯತೀತರು ಎಂದು ಭಂಡತನ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ.