ಮುಂಬೈ, ಮೇ 24 (DaijiworldNews/DB): ಲಷ್ಕರ್-ಎ-ತೈಯಬಾ (ಎಲ್ಇಟಿ) ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ವ್ಯಕ್ತಿಯೊಬ್ಬನನ್ನು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಬಂಧಿಸಿದೆ.
ಬಂಧನಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಎಟಿಎಸ್ನ ಹಿರಿಯ ಅಧಿಕಾರಿಯೊಬ್ಬರು, ಜುನೈದ್ ಎಂಬ ಶಂಕಿತ ಉಗ್ರನನ್ನು ಬಂಧಿಸಲಾಗಿದೆ. ಈತ ಪುಣೆಯ ನಿವಾಸಿಯಾಗಿದ್ದು, ಎಲ್ಇಟಿಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ನಂಟು ಬೆಳೆಸಿಕೊಂಡಿದ್ದ. ಭಯೋತ್ಪಾದನಾ ನಿಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನನ್ನು ಬಂಧನಕ್ಕೊಳಪಡಿಸಲಾಗಿದೆ ಎಂದಿದ್ದಾರೆ.
ಪುಣೆಯ ನ್ಯಾಯಲಯಕ್ಕೆ ಬಂಧಿತನನ್ನು ಹಾಜರುಪಡಿಸಲಾಗಿತ್ತು. ಆದರೆ ಇದೀಗ ವಿಚಾರಣೆಗಾಗಿ ಜೂನ್ 3ರವರೆಗೆ ಎಟಿಎಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.