ಬೆಂಗಳೂರು, ಮೇ 20 (DaijiworldNews/SM): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾಗವಹಿಸಿದರು. ಅಲ್ಲದೆ ವಿವಿಧ ಕಂಪನಿಗಳ ಮುಖ್ಯಸ್ಥರನ್ನು ಭೇಟಿಯಾಗಿದ್ದಾರೆ. ಅಲ್ಲಿ ರಾಜ್ಯದಲ್ಲಿನ ಹೂಡಿಕೆ ಬಗ್ಗೆ ಮಾತುಕತೆ ನಡೆಸಲಾಗಿದೆ.
ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ, ಭಾರ್ತಿ ಎಂಟರ್ ಪ್ರೈಸಸ್ ನ ಸಿಇಒ ಸುನೀಲ್ ಭಾರ್ತಿ ಮಿತ್ತಲ್ ಮತ್ತಿತರನ್ನು ಭೇಟಿಯಾದ ಮುಖ್ಯಮಂತ್ರಿ, ರಾಜ್ಯದಲ್ಲಿನ ಹೂಡಿಕೆ ಅವಕಾಶ ಕುರಿತಂತೆ ಚರ್ಚೆ ನಡೆಸಿದರು.
ರೆನ್ಯೂ ಪವರ್ ಪ್ರೈ.ಲಿ. ಕಂಪನಿಯು ರಾಜ್ಯ ಸರ್ಕಾರದೊಂದಿಗೆ 50,000 ಕೋಟಿ ರೂ. ಹೂಡಿಕೆ ಒಪ್ಪಂದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಸಹಿ ಹಾಕಿದೆ. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ ಬಿಟಿ ಸಚಿವ ಡಾ.ಸಿ. ಎನ್. ಅಶ್ವತ್ಥ ನಾರಾಯಣ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.