ಚಿತ್ರದುರ್ಗ, ಮೇ 24 (DaijiworldNews/SM): ಜಿಲ್ಲೆಯಲ್ಲಿ ತಾಯಿಯೊಬ್ಬರು ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ತ್ರಿವಳಿ ಮಕ್ಕಳ ಜನವಾಗಿದೆ. ತಾಯಿ ಹಾಗೂ ಮಕ್ಕಳು ಎಲ್ಲರೂ ಕೂಡ ಆರೋಗ್ಯವಂತರಾಗಿದ್ದಾರೆ ಎಂದು ತಿಳಿದುಬಂದಿದೆ.
ಜಿಲ್ಲೆಯ ಚಳ್ಳಕೆರೆ ತಾಲೂಕಿನ ದೇವರಹಳ್ಳಿ ಗ್ರಾಮದ ಹುಸೇನ್ ಎಂಬುವವರ ಪತ್ನಿ ಸುಮಯ್ಯಗೆ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿಯಾಗಿದ್ದಾರೆ. ಅವರು ಮೂರು ಗಂಡು ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಸುಮಯ್ಯ ಅವರು ಹೆರಿಗೆಗೆಂದು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಮಕ್ಕಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದಾರೆ. ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.