ಕೊಪ್ಪಳ, ಮೇ 25 (DaijiworldNews/MS): ವೈಯಕ್ತಿಕ ಕಾನೂನುಗಳಿಗಿಂತ, ದೇಶದ ಎಲ್ಲಾ ನಾಗರಿಕರಿಗೂ ಒಂದೇ ರೀತಿಯ ಕಾನೂನು ಇರಬೇಕು. ಹೀಗಾಗಿ ಮುಂದೊಂದು ದಿನ ದೇಶದಲ್ಲಿ ಏಕ ರೂಪ ನಾಗರಿಕ ಸಂಹಿತೆ ಕಾನೂನು ಜಾರಿಗೆ ತರುತ್ತೇವೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಕುಕನೂರಿನಲ್ಲಿ ನಡೆದ ಜಿಲ್ಲಾ ಬಿಜೆಪಿ ಕಾರ್ಯಕಾರಣಿಯಲ್ಲಿ ಏಕರೂಪ ನಾಗರಿಕ ಕಾನೂನು ಜಾರಿ ಬಗ್ಗೆ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಸರ್ಕಾರ ಏನು ಹೇಳಿದೆ ಅದನ್ನೇ ಮಾಡಿದೆ. ಅದ್ದರಿಂದ ದೇಶದಲ್ಲಿ ಇಂದಲ್ಲ. ನಾಳೆ ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.
ಸಮಾನವಾದ ಶಾಸನಗಳು ನಮಗೆ ಅಗತ್ಯ. ದೇಶದ ಎಲ್ಲಾ ನಾಗರಿಕರಿಗೂ ಒಂದೇ ರೀತಿಯ ಕಾನೂನು ಇರಬೇಕು ಎಂಬುದು ಬಿಜೆಪಿಯ ನಿಲುವಾಗಿದೆ. ಬಹುಕಾಲದಿಂದ ಈ ವಿಚಾರವನ್ನು ಪ್ರಸ್ತಾಪ ಮಾಡುತ್ತಲೇ ಬಂದಿದೆ. ಹೀಗಾಗಿ ದೇಶದಲ್ಲಿ ಏಕ ರೂಪ ನಾಗರಿಕ ಸಂಹಿತೆ ಕಾನೂನು ಜಾರಿಗೆ ತರುತ್ತೇವೆ ಎಂದರು.