ಮುಂಬೈ, ಮೇ 25 (DaijiworldNews/DB): ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆ ಉಲ್ಲಂಘನೆ ಆರೋಪದಲ್ಲಿ ಶಿವಸೇನಾ ನಾಯಕ ಯಶವಂತ್ ಜಾಧವ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಬುಧವಾರ ಸಮನ್ಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಜಾಧವ್ ಅವರಿಗೆ ಸಮನ್ಸ್ ನೀಡಿರುವುದನ್ನು ಜಾರಿ ನಿರ್ದೇಶನಾಲಯವು ಸ್ಪಷ್ಟಪಡಿಸಿದೆ ಎಂಬುದಾಗಿ ಸುದ್ದಿಸಂಸ್ಥೆಯೊಂದು ಟ್ವೀಟ್ ಮಾಡಿ ತಿಳಿಸಿದೆ.
ಜಾಧವ್ ಅವರಿಗೆ ಸಮನ್ಸ್ ನೀಡಿದ ಬೆನ್ನಲ್ಲೇ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನ ಶಿಕ್ಷೆ ಅನುಭವಿಸುತ್ತಿರುವ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ನವಾಬ್ ಮಲಿಕ್ ಅವರ ಪತ್ನಿ ಹಾಗೂ ಇಬ್ಬರು ಮಕ್ಕಳಿಗೂ ಸಮನ್ಸ್ ಜಾರಿಯಾಗಿದೆ ಎನ್ನಲಾಗುತ್ತಿದೆ. ಜಾರಿ ನಿರ್ದೇಶನಾಲಯವು ಅವರಿಗೆ ಸಮನ್ಸ್ ನೀಡಿರುವುದಾಗಿ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.