ಲಖನೌ, ಮೇ 25 (DaijiworldNews/DB): ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಆ ಮೂಲಕ ಕಾಂಗ್ರೆಸ್ನ ಮತ್ತೊಂದು ವಿಕೆಟ್ ಪತನವಾಗಿದೆ.
ಕಾಂಗ್ರೆಸ್ ತೊರೆದಿರುವ ಕಪಿಲ್ ಸಿಬಲ್ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಉತ್ತರ ಪ್ರದೇಶದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಕಾಂಗ್ರೆಸ್ಗೆ ರಾಜೀನಾಮೆ ನೀಡಿರುವ ವಿಚಾರವನ್ನು ಘೋಷಿಸಿದರು. ಇದಕ್ಕೂ ಮುನ್ನ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರನ್ನು ಲಕ್ನೋದಲ್ಲಿ ಭೇಟಿಯಾದರು.
ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ್ದ ಅವರು, ಮೇ 16ರಂದು ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಸಮಾಜವಾದಿ ಪಾರ್ಟಿಯಲ್ಲಿ ತೊಡಗಿಸಿಕೊಳ್ಳಲಿದ್ದೇನೆ ಎಂದರು.