ಬೆಂಗಳೂರು,ಮೇ 25 (DaijiworldNews/MS): ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ವಿಧಾನಪರಿಷತ್ ಟಿಕೆಟ್ ಕೊನೆಯ ಕ್ಷಣದಲ್ಲಿ ಟಿಕೆಟ್ ತಪ್ಪಿದ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಇದು ಬಿಜೆಪಿ ಪಕ್ಷಕ್ಕೆ ತಿರುಗುಬಾಣವಾಗಲಿದೆ ಎಂದು ಹೇಳಿದ್ದಾರೆ.
ಬಿ.ವೈ ವಿಜಯೇಂದ್ರಗೆ ಟಿಕೆಟ್ ನೀಡದೆ ಇರುವುದರಿಂದ ಬೇರೆ ಪಕ್ಷಕ್ಕೆ ಲಾಭ ನಷ್ಟದ ಪ್ರಶ್ನೆ ಇಲ್ಲ, ಆದರೆ ಇದು ಬಿಜೆಪಿ ಸರ್ಕಾರದ ಮೇಲೆ ನೇರ ಪರಿಣಾಮ ಬೀರಬಹುದು. ಬಿಜೆಪಿಯಲ್ಲಿ ಗುಂಪುಗಾರಿಕೆಗೆ ಇನ್ನು ಹೆಚ್ಚು ಅವಕಾಶವಾಗಬಹುದು ಟಿಕೆಟ್ ನಿರಾಕರಣೆ ವಿಚಾರ ಆಡಳಿತದ ಮೇಲೂ ಕೆಟ್ಟ ಪರಿಣಾಮ ಬೀರುವ ಲಕ್ಷಣ ಕಾಣುತ್ತಿದೆ ಎಂದಿದ್ದಾರೆ.
ಇನ್ನು ಕಾಂಗ್ರೆಸ್ ವಿರುದ್ದ ಕಿಡಿಕಾರಿದ ಅವರು ಜೆಡಿಎಸ್ ಹಿತ ಶತ್ರುಗಳಿಂದ ತಮಗೆ ಲಾಭ ಆಗುತ್ತೆ ಎಂದು ಕೈ ಪಡೆ ಲೆಕ್ಕಚಾರ ಹಾಕಿತ್ತು. ಅದ್ಯಾವುದೂ ಈಗ ನಡೆಯುವುದಿಲ್ಲ. ಪಕ್ಷದಲ್ಲಿರುವ ಹಿತಶತ್ರುಗಳು ಈಗ ನೇರ ಶತ್ರುಗಳಾಗಿದ್ದಾರೆ ಎಂದು ಹೇಳಿದ್ದಾರೆ